ಸೆಪ್ಟೆಂಬರ್‌ನಲ್ಲಿ ಯುರೋಪ್‌ಗೆ ರಾಹುಲ್ ಗಾಂಧಿ ಪ್ರವಾಸ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೆಪ್ಟೆಂಬರ್‌ನಲ್ಲಿ ಯುರೋಪ್‌ ಗೆ ಐದು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಪ್ಯಾರಿಸ್‌ನ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ರಾಹುಲ್‌ ಗಾಂಧಿ ಪ್ರವಾಸ ವೇಳಾಪಟ್ಟಿ:

ಸೆಪ್ಟೆಂಬರ್ 7 ರಂದು ಬ್ರಸೆಲ್ಸ್‌ನಲ್ಲಿ ಯುರೋಪಿಯನ್ ಯೂನಿಯನ್ ಸದಸ್ಯರ ಸಭೆಯಲ್ಲಿ ಭಾಗವಹಿಸಲಿರುವ ರಾಹುಲ್‌, ಸೆಪ್ಟೆಂಬರ್ 8ರಂದು ಪ್ಯಾರಿಸ್‌ನ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸೆಪ್ಟೆಂಬರ್ 9ರಂದು ಫ್ರಾನ್ಸ್‌ನ ಕಾರ್ಮಿಕ ಒಕ್ಕೂಟದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 10ರಂದು ನಾರ್ವೆಗೆ ಭೇಟಿ ನೀಡಲಿರುವ ಅವರು ಅಲ್ಲಿ ಭಾರತೀಯ ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ರಾಹುಲ್‌ ಗಾಂಧಿ ಪ್ರವಾಸದ ವೇಳೆ ಅನಿವಾಸಿ ಭಾರತೀಯರನ್ನು ಭೇಟಿ ಮಾಡಿ ಸಂವಾದ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!