ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.ಟ್ವೀಟ್ ಮೂಲಕ ರಾಹುಲ್ ಗಾಂಧಿ ಹೇಳಿಕೆಯನ್ನು ಟೀಕಿಸಿರುವ ಅವರು, ವಿರುದ್ಧ ಟೀಕೆಸೈದ್ಧಾಂತಿಕ ಬದ್ಧತೆ ಎಂದರೆ ಏನು? ಪ್ರಾದೇಶಿಕ ಪಕ್ಷಗಳಿಗೆ ಸ್ವಲ್ಪ ಬಿಡಿಸಿ ಹೇಳಬೇಕು ಎಂದಿದ್ದಾರೆ.
ಕಾಂಗ್ರೆಸ್ ಚಿಂತನಾ ಶಿಬಿರದದಲ್ಲಿ ರಾಹುಲ್ ಗಾಂಧಿ ಪ್ರಾದೇಶಿಕ ಪಕ್ಷಗಳಿಗೆ ಸೈದ್ಧಾಂತಿಕ ಬದ್ಧತೆ ಇಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ನೀಡುವ ಮೂಲಕ ರಾಹುಲ್ ಗಾಂಧಿ ಅವರು ಪ್ರಾದೇಶಿಕ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಸೈದ್ಧಾಂತಿಕ ಬದ್ಧತೆ ಎಂದರೆ ಏನು. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಹಿನ್ನೆಲೆಯ ನೆಪ ನೀಡಿ ಡಿಎಂಕೆ-ಎಲ್‌ಟಿಟಿಇ ಸಂಬಂಧವನ್ನು ಮುನ್ನೆಲೆಗೆ ತಂದು ಆ ಪಕ್ಷವನ್ನು ಸಂಪುಟದಿಂದ ಹೊರಗಿಡಲು, ಐ.ಕೆ. ಗುಜ್ರಾಲ್ ನೇತೃತ್ವದ ಸಂಯುಕ್ತ ರಂಗ ಸರಕಾರವನ್ನು ಉರುಳಿಸಿ.ಆಮೇಲೆ ಅದೇ ಡಿಎಂಕೆ ಪಕ್ಷದ ಹೆಗಲ ಮೇಲೆ ಕೈ ಹಾಕಿದ್ದು ಸೈದ್ದಾಂತಿಕ ಬದ್ಧತೆಯಾ ಎಂದು ಕಾಂಗ್ರೆಸ್ಗೆ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಯುಪಿಎ ಸರಕಾರದಲ್ಲಿ ಡಿಎಂಕೆಯ ಜತೆ 10 ವರ್ಷ ಅಧಿಕಾರ ಹಂಚಿಕೊಂಡಿದ್ದು ಸೈದ್ಧಾಂತಿಕ ಬದ್ಧತೆಯಾ, ಕಾಂಗ್ರೆಸ್ ಪಕ್ಷ 10 ವರ್ಷ ಅಧಿಕಾರ ಅನುಭವಿಸಿದ್ದು ಪ್ರಾದೇಶಿಕ ಪಕ್ಷಗಳ ಶಕ್ತಿ, ದಾಕ್ಷಿಣ್ಯದಿಂದ ಎಂಬದನ್ನು ಮರೆಯಬಾರದು.ಮೈತ್ರಿ ಸರ್ಕಾರವೆನ್ನುವ ನೆಪದಲ್ಲಿ ಹಿಂಬಾಗಿಲಿನಿಂದ ಆಪರೇಷನ್ ಕಮಲವೆಂಬ ಅನೈತಿಕ ರಾಜಕಾರಣಕ್ಕೆ ಕೈ ಜೋಡಿಸಿದ್ದು ಸೈದ್ಧಾಂತಿಕ ಬದ್ಧತೆಯೇ ಅಥವಾ ಮಿತ್ರಪಕ್ಷಗಳನ್ನೇ ನುಂಗು ಹಾಕುವುದು ಸೈದ್ಧಾಂತಿ ಬದ್ಧತೆ ಇರಬಹುದು ಎಂದು ವ್ಯಂಗವಾಡಿದ್ದಾರೆ