ಪ್ರಧಾನಿ ಮೋದಿಯ ಎರಡು ಟೀಕೆಗಳಿಗೆ ಕಕ್ಕಾಬಿಕ್ಕಿಯಾದ ರಾಹುಲ್​ ಗಾಂಧಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ವರ್ಷದ ಹಿನ್ನೆಲೆಯಲ್ಲಿ ಜನತೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಕೆಂಪುಕೋಟೆಯಲ್ಲಿ ಭಾಷಣ ಮಾಡಿ ಹಲವಾರು ವಿಷಯಗಳನ್ನು ಹಂಚಿಕೊಂಡರು.

ಈ ವೇಳೆ ಕಾಂಗ್ರೆಸ್​ ಪಕ್ಷವನ್ನು ಪರೋಕ್ಷವಾಗಿ ಟೀಕಿಸುತ್ತಾ, ಭಾರತವು ಭ್ರಷ್ಟಾಚಾರ ಮತ್ತು ವಂಶ ಪಾರಂಪರ್ಯ ರಾಜಕೀಯ ಎಂಬೆರಡು ದೊಡ್ಡ ಸವಾಲುಗಳನ್ನು ಎದುರಿಸುತ್ತಿದೆ ಎಂದು ಹೇಳಿದರು.

ಭ್ರಷ್ಟಾಚಾರವು ಗೆದ್ದಲಿನ ಹಾಗೆ ದೇಶವನ್ನು ಹಾಳು ಮಾಡುತ್ತಿದೆ. ದೇಶ ಇದರ ವಿರುದ್ಧ ಹೋರಾಡಬೇಕು. ಭ್ರಷ್ಟಾಚಾರವನ್ನು ಕಿತ್ತೊಗೆಯಬೇಕು ಎಂದು ಪ್ರಧಾನಿ ಹೇಳಿದ್ದರು.
ಇದೇ ವೇಳೆ ಕುಟುಂಬ ರಾಜಕಾರಣವನ್ನೂ ಟೀಕಿಸಿದ್ದ ಅವರು, ಪರಿವಾರವಾದವು ಕೇವಲ ರಾಜಕೀಯಕ್ಕೆ ಮಾತ್ರವೇ ಸೀಮಿತವಾಗಿಲ್ಲ. ನಮ್ಮ ಅನೇಕ ಸಂಸ್ಥೆಗಳು ಕೂಡ ಕುಟುಂಬ ರಾಜಕೀಯದ ಪರಿಣಾಮ ಎದುರಿಸುತ್ತಿವೆ. ಪರಿವಾರವಾದವು ನಿಜವಾದ ಪ್ರತಿಭೆಗಳು ಮತ್ತ ರಾಷ್ಟ್ರದ ಸಾಮರ್ಥ್ಯಕ್ಕೆ ಹಾನಿ ಮಾಡುತ್ತಿವೆ. ಇದು ಭ್ರಷ್ಟಾಚಾರ ಹೆಚ್ಚಳಕ್ಕೂ ಕಾರಣವಾಗಿದೆ ಎಂದಿದ್ದರು.

 

ಇನ್ನು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಂಸದ ರಾಹುಲ್​ ಗಾಂಧಿ ಅವರನ್ನು ಪತ್ರಕರ್ತರು ಪ್ರಶ್ನಿಸಿದ್ದು, ಭಾರತವು ಭ್ರಷ್ಟಾಚಾರ ಮತ್ತು ವಂಶ ಪಾರಂಪರ್ಯ ರಾಜಕೀಯ ಎಂಬೆರಡು ದೊಡ್ಡ ಸವಾಲುಗಳನ್ನು ಎದುರಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ, ಅದಕ್ಕೆ ನೀವೇನು ಹೇಳುತ್ತೀರಿ ಎಂದು ಕೇಳಿದ್ದಾರೆ.

ಅಚಾನಕ್​ ಆಗಿ ಎದುರಾದ ಈ ಪ್ರಶ್ನೆಗಳಿಗೆ ಏನು ಉತ್ತರಿಸಬೇಕು ಎಂದು ತಿಳಿಯದೇ ರಾಹುಲ್​ ಗಾಂಧಿ ಕಕ್ಕಾಬಿಕ್ಕಿಯಾದರು. ನಂತರ ತಮ್ಮ ಮಾಸ್ಕ್​ ಸರಿಪಡಿಸಿಕೊಳ್ಳುತ್ತಾ, ‘ನಾನು ಇಂತಹ ವಿಷಯಗಳ ಕುರಿತು ಪ್ರತಿಕ್ರಿಯಿಸಲು ಇಚ್ಛಿಸುವುದಿಲ್ಲ. ಎಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳು’ ಎಂದು ಹೇಳಿ ಕಾರನ್ನು ಹತ್ತಿಯೇ ಬಿಟ್ಟರು.
ಅದರ ವಿಡಿಯೋ ಇದೀಗ ಭಾರಿ ವೈರಲ್​ ಆಗಿದ್ದು, ಹಲವರು ತಮಾಷೆ ಮಾಡಿದ್ದಾರೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!