ಹೊಸ ಪಾಸ್‌ಪೋರ್ಟ್‌ ಗಾಗಿ ಕೋರ್ಟ್ ಮೊರೆಹೋದ ರಾಹುಲ್ ಗಾಂಧಿ: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ವಿರೋಧ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹೊಸ ಪಾಸ್‌ಪೋರ್ಟ್‌ಗೆ (Passport) ಅವಕಾಶ ಮಾಡಿಕೊಡಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ದಿಲ್ಲಿ ನ್ಯಾಯಾಲಯದ ಮುಂದೆ ಮನವಿ ಸಲ್ಲಿಸಿದ್ದರು.

ಇದಕ್ಕೆ BJP ನಾಯಕ ಸುಬ್ರಮಣಿಯನ್ ಸ್ವಾಮಿ (Subramanian swamy) ಅವರು ವಿರೋಧ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ ಪರವಾಗಿ ಅವರ ವಕೀಲ ತರುನ್ನುಮ್ ಚೀಮಾ, ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ವೈಭವ್ ಮೆಹ್ತಾ ಅವರ ಮುಂದೆ ಮನವಿ ಸಲ್ಲಿಸಿದ್ದು, ಹೊಸದಾಗಿ ಪಾಸ್‌ಪೋರ್ಟ್‌ಗಾಗಿ ಎನ್‌ಒಸಿ ನೀಡುವಂತೆ ಕೇಳಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಜಾಮೀನು ನೀಡುವಾಗ ಯಾವುದೇ ನಿರ್ಬಂಧಗಳನ್ನು ಹಾಕಿಲ್ಲ ಎಂದರು. ಹಾಗಿದ್ದೂ, ರಾಹುಲ್ ಗಾಂಧಿ ಅವರ ಮನವಿಗೆ ಸುಬ್ರಮಣಿಯನ್ ಸ್ವಾಮಿ ಅವರು ಪ್ರತಿಕ್ರಿಯಸಬೇಕಾಗುತ್ತದೆ ಎಂದು ಕೋರ್ಟ್ ಹೇಳಿದ್ದು, ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಲಾಗಿದೆ.

ಒಂದು ವೇಳೆ, ರಾಹುಲ್ ಗಾಂಧಿ ಅವರಿಗೆ ವಿದೇಶಕ್ಕೆ ಹೋಗಲು ಅನುಮತಿ ನೀಡಿದರೆ, ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರ ಪ್ರಕರಣದ ವಿಚಾರಣೆಯ ಮೇಲೆ ಪರಿಣಾಮ ಬೀರಲಿದೆ ಎಂದು ಸುಬ್ರಮಣಿಯನ್ ಸ್ವಾಮಿ ಅವರು ಅಭಿಪ್ರಾಯಪಟ್ಟಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ ಕುರಿತು ಸುಬ್ರಹ್ಮಣ್ಯಸ್ವಾಮಿ ಅವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಸುಮನ್ ದುಬೇ, ಸ್ಯಾಮ್ ಪಿತ್ರೋಡಾ ಕುರಿತು ಖಾಸಗಿ ದೂರು ನೀಡಿದ್ದರು. ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಂಡ ಬಳಿಕ ರಾಹುಲ್ ಗಾಂಧಿ ಅವರು ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಸರೆಂಡರ್ ಮಾಡಿದ್ದರು. ಹಾಗಾಗಿ ಹೊಸದಾಗಿ ಪಾಸ್‌ಪೋರ್ಟ್‍ಗಾಗಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!