ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇ.31ರಂದು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ.
ರಾಹುಲ್ ಗಾಂಧಿ ಜೂನ್ ೪ರಂದು ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಸುಮಾರು 5000 ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ವಾಷಿಂಗ್ಟನ್ ಮತ್ತು ಕ್ಯಾಲಿಫೋರ್ನಿಯಾದಲ್ಲಿ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯಗಳಲ್ಲಿ ಚರ್ಚೆ ನಡೆಸಲಿದ್ದಾರೆ. ಇಲ್ಲಿ ರಾಜಕಾರಣಿಗಳು ಹಾಗೂ ಉದ್ಯಮಿಗಳನ್ನೂ ಭೇಟಿಯಾಗಲಿದ್ದಾರೆ. ಒಟ್ಟಾರೆ 10 ದಿನಗಳ ಅಮೆರಿಕ ಪ್ರವಾಸ ಇದಾಗಿರಲಿದೆ.