Tuesday, March 21, 2023

Latest Posts

ರಾಹುಲ್ ಗಾಂಧಿ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ : ಮಲ್ಲಿಕಾರ್ಜುನ ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬ್ರಿಟನ್‌ನಲ್ಲಿ ಭಾರತ ಪ್ರಜಾಪ್ರಭುತ್ವದ ಕುರಿತು ನೀಡಿರುವ ಹೇಳಿಕೆಗೆ ರಾಹುಲ್ ಗಾಂಧಿ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ರಾಹುಲ್ ಕ್ಷಮೆಯಾಚನೆಗೆ ಒತ್ತಾಯಿಸುವವರು, ಪ್ರಧಾನಿ ಮೋದಿ ವಿದೇಶಗಳಲ್ಲಿ ಭಾರತದ ಜನರನ್ನು ಅಪಮಾನಿಸಿರುವ ಕುರಿತು ಉತ್ತರಿಸಬೇಕಿದೆ ಎಂದು ಒತ್ತಾಯಿಸಿದ್ದಾರೆ.

ದೇಶದಲ್ಲಿ ಪ್ರಜಾಪ್ರಭುತ್ವ ದುರ್ಬಲವಾಗುತ್ತಿದೆ, ಅಭಿವ್ಯಕ್ತಿ ಮತ್ತು ವಾಕ್ ಸ್ವಾತಂತ್ರ್ಯವನ್ನು ದುರ್ಬಲಗೊಳಿಸಲಾಗುತ್ತಿದೆ. ಟಿವಿ ಚಾನೆಲ್‌ಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಹಾಗೂ ಸತ್ಯವನ್ನು ಮಾತನಾಡುವ ಜನರನ್ನು ಜೈಲಿಗೆ ಹಾಕಲಾಗುತ್ತಿದೆ. ಹಾಗಾದರೆ ಇದು ಪ್ರಜಾಪ್ರಭುತ್ವವನ್ನು ಅಂತ್ಯಗೊಳಿಸುವ ಪ್ರಕ್ರಿಯೆ ಅಲ್ಲದೆ ಇನ್ನೇನು?’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು. ಯಾವುದೇ ಕಾರಣಕ್ಕೂ ರಾಹುಲ್‌ ಗಾಂಧಿ ಕ್ಷಮೆಯಾಚಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!