ಜೂನ್ 29ರಂದು ಮಣಿಪುರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೂನ್ 29-30 ರಂದು ಹಿಂಸಾಚಾರ ಪೀಡಿತ ಮಣಿಪುರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಈ ಭೇಟಿಯ ಸಮಯದಲ್ಲಿ ರಾಹುಲ್ ಗಾಂಧಿ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದು, ಇಂಫಾಲ್ ಚುರಾಚಂದ್ಪುರದ ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

https://twitter.com/kcvenugopalmp/status/1673705377169559555

ಮಣಿಪುರದಲ್ಲಿ ಹಿಂಸಾಚಾರದಲ್ಲಿ 110 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!