ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿರುವ ʼಯುವ ಕ್ರಾಂತಿ ಸಮಾವೇಶʼ ದಲ್ಲಿ ಪಾಲ್ಗೊಳ್ಳಲು ಎಐಸಿಸಿ ಮುಖಂಡ ರಾಹುಲ್ ಗಾಂಧಿ ಇಂದು ಬೆಳಗಾವಿಗೆ ಆಗಮಿಸಲಿದ್ದಾರೆ.
ಭಾರತ್ ಜೋಡೋ ಯಾತ್ರೆಯ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಪಕ್ಷದ ಚುನಾವಣ ಕಹಳೆ ಮೊಳಗಿಸಲಿದ್ದಾರೆ.
ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ತೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೋಳಿ, ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ ಸೇರಿದಂತೆ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ.