ತಾಯಿ ಶೂ ಲೇಸ್ ಕಟ್ಟಿದ ರಾಹುಲ್ ಗಾಂಧಿ, ಫೋಟೊ ವೈರಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ್ ಜೋಡೋ ಯಾತ್ರೆ ಸಾಗುತ್ತಿದ್ದು, ಇದೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರದ ಬೆಳ್ಳಾಲೆಯಲ್ಲಿ ಕಾಂಗ್ರೆಸ್ ಪಾದಯಾತ್ರೆ ಆರಂಭವಾಗಿದ್ದು, ಸೋನಿಯಾ ಗಾಂಧಿ ಸ್ವಲ್ಪ ಸಮಯ ಪಾದಯಾತ್ರೆ ನಡೆಸಿದರು. ಈ ವೇಳೆ ಸೋನಿಯಾ ಗಾಂಧಿ ಅವರ ಶೂ ಲೇಸ್ ಬಿಚ್ಚಿದ್ದು, ನಡುರಸ್ತೆಯಲ್ಲೇ ರಾಹುಲ್ ಗಾಂಧಿ ಸೋನಿಯಾ ಗಾಂಧಿ ಅವರ ಶೂ ಲೇಸ್ ಕಟ್ಟಿದ್ದಾರೆ. ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಮೊದಲು ಕೇರಳದ ಅಲಪ್ಪುಳದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಬಾಲಕಿಯ ಚಪ್ಪಲಿ ಸಡಿಲವಾಗಿ ಆಕೆ ನಡೆಯಲು ಕಷ್ಟಪಡುತ್ತಿದ್ದಳು. ಇದನ್ನು ಗಮನಿಸಿದ ರಾಹುಲ್ ಬಾಲಕಿಯ ಚಪ್ಪಲಿ ಸರಿಪಡಿಸಿದ್ದರು. ಈ ವಿಡಿಯೋ ಕೂಡ ವೈರಲ್ ಆಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!