ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನಕ್ಕೆಆಪರೇಷನ್ ಸಿಂದೂರವನ್ನು ಆರಂಭಿಸಿದಾಗಲೇ ಪಾಮಾಹಿತಿ ನೀಡಿದ್ದೆವು ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿಕೆಗೆ ಮತ್ತೊಮ್ಮೆ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದರು. ಆರಂಭದಲ್ಲೇ ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ನೀಡಿದ್ದು ದೊಡ್ಡ ಅಪರಾಧ ಎಂದಿದ್ದರು.
ಇದೀಗ ಈ ಹೇಳಿಕೆಯನ್ನೇ ಇಟ್ಟುಕೊಂಡು ಪಾಕಿಸ್ತಾನದ ಮಾಧ್ಯಮದಲ್ಲಿ ದೊಡ್ಡ ಚರ್ಚೆ ನಡೆಯುತ್ತಿದೆ. ಇದಕ್ಕೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಟೀಕಾಪ್ರಹಾರ ನಡೆಸಿದ್ದು, ಭಾರತದ ವಿರುದ್ಧ ಪಾಕಿಸ್ತಾನದಲ್ಲಿ ನ್ಯೂಸ್ ಮಾಡಲು ರಾಹುಲ್ ಗಾಂಧಿಯೇ ವಿಷಯಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಪಾಕಿಸ್ತಾನದ ಮೇಲಿನ ದಾಳಿಯಲ್ಲಿ ಭಾರತದ ಎಷ್ಟು ಯುದ್ಧ ವಿಮಾನಗಳಿಗೆ ಹಾನಿಯಾಗಿದೆ? ಎಂದು ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದರು. ಆದರೆ, ಸಚಿವ ಜೈಶಂಕರ್ ಅದಕ್ಕೆ ಉತ್ತರಿಸಲು ನಿರಾಕರಿಸಿದ್ದು, ಎಲ್ಲ ಫೈಟರ್ ಜೆಟ್ಗಳೂ ಸುರಕ್ಷಿತವಾಗಿ ಭಾರತದೊಳಗೆ ಬಂದಿದ್ದಾರೆ ಎಂದಿದ್ದರು. ಈ ಬಗ್ಗೆ ಮಾಹಿತಿ ನೀಡಿದರೆ ಅದನ್ನು ಪಾಕಿಸ್ತಾನ ದುರುಪಯೋಗಪಡಿಸಿಕೊಳ್ಳಬಹುದು ಎಂದು ಹೇಳಿತ್ತು.
ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರ ಮೇಲಿನ ತಮ್ಮ ದಾಳಿಯನ್ನು ದ್ವಿಗುಣಗೊಳಿಸಿರುವ ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರವು ಆಪರೇಷನ್ ಸಿಂದೂರ್‌ನ ಪ್ರಾರಂಭದಲ್ಲಿ ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು. ಇದು ದೊಡ್ಡ ಅಪರಾಧ ಎಂದು ಹೇಳಿದ್ದಾರೆ ಎಂಬ ತಮ್ಮ ಹಿಂದಿನ ಹೇಳಿಕೆಯನ್ನು ಇಂದು ಪುನರುಚ್ಚರಿಸಿದ್ದಾರೆ.
ಇದಕ್ಕೆ ಸರ್ಕಾರದಿಂದ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದನ್ನು ‘ಸತ್ಯಗಳ ಸಂಪೂರ್ಣ ತಪ್ಪು ನಿರೂಪಣೆ’ ಎಂದು ಕರೆದಿದೆ. ಸಚಿವರ ಹೇಳಿಕೆಗಳನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಪ್ಪಾಗಿ ನಿರೂಪಿಸಿರುವುದು ದುರುದ್ದೇಶಪೂರಿತ ಉದ್ದೇಶ ಎಂದು ಬಿಜೆಪಿ ಹೇಳಿದೆ.