ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧದ ಅವಿಶ್ವಾಸ ನಿರ್ಣಯದ ಕುರಿತು ಇಂದು ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡುತ್ತಿದ್ದಾರೆ.
ರಾಹುಲ್ ಗಾಂಧಿ ತಮ್ಮ ಸಂಸದ ಸ್ಥಾನವನ್ನು ಮರಳಿ ಪಡೆದ ನಂತರ ಅವರು ಮೊದಲ ಬಾರಿಗೆ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ.
ಕಾಂಗ್ರೆಸ್ ಪಕ್ಷವು ಮಂಗಳವಾರ ಕೆಳಮನೆಯಲ್ಲಿ ಅವಿಶ್ವಾಸ ನಿರ್ಣಯವನ್ನು ಮಂಡಿಸಿದ ನಂತರ ಸಂಸದ ಗೌರವ್ ಗೊಗೊಯ್ ಮಂಗಳವಾರ ಚರ್ಚೆಯನ್ನು ಆರಂಭಿಸಿದ್ದರು. ಮಣಿಪುರದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಮೌನ ವ್ರತವನ್ನು ಮುರಿಯಲು ಸರ್ಕಾರದ ವಿರುದ್ಧ ಬಲವಂತವಾಗಿ ನಿರ್ಣಯ ಮಂಡಿಸಲಾಯಿತು ಎಂದು ಕಾಂಗ್ರೆಸ್ ಹೇಳಿದೆ.