ರಾಹುಲ್ ಗಾಂಧಿ ಮತಗಳ್ಳತನ ಆರೋಪ ಅಸಂಬದ್ಧ ವಿಶ್ಲೇಷಣೆ; ದೇಶದ ಮುಂದೆ ಕ್ಷಮೆಯಾಚಿಸಿ: ಚುನಾವಣಾ ಆಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮತಗಳ್ಳತನ ಆಗಿದೆ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಕ್ಕೆ ಕೇಂದ್ರ ಚುನಾವಣಾ ಆಯೋಗ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಇಂಡಿಯಾ ಒಕ್ಕೂಟ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮತಗಳ್ಳತನ ಆರೋಪವನ್ನು ಅಸಂಬದ್ಧ ವಿಶ್ಲೇಷಣೆ ಎಂದು ಚುನಾವಣಾ ಆಯೋಗ ಕರೆದಿದೆ. ದಾರಿತಪ್ಪಿಸುವ ವ್ಯಾಖ್ಯಾನಗಳನ್ನು ಹರಡಿದ್ದಕ್ಕಾಗಿ ದೇಶದ ಕ್ಷಮೆಯಾಚಿಸಿ ಎಂದು ಚುನಾವಣಾ ಆಯೋಗ ಒತ್ತಾಯಿಸಿದೆ.

ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧದ ಆರೋಪಗಳು ನಿಜವೆಂದು ನಂಬಿದರೆ, ಘೋಷಣೆಗೆ ಸಹಿ ಹಾಕುವಲ್ಲಿ ಅವರಿಗೆ ಯಾವುದೇ ಸಮಸ್ಯೆ ಇರಬಾರದು. ಅವರು ಘೋಷಣೆಗೆ ಸಹಿ ಹಾಕದಿದ್ದರೆ, ತಮ್ಮ ವಿಶ್ಲೇಷಣೆ ಮತ್ತು ಅಸಂಬದ್ಧ ಆರೋಪಗಳಲ್ಲಿ ನಂಬಿಕೆ ಇಟ್ಟಿಲ್ಲ ಎಂದರ್ಥ. ಈ ಸಂದರ್ಭದಲ್ಲಿ, ಅವರು ರಾಷ್ಟ್ರದ ಕ್ಷಮೆಯಾಚಿಸಬೇಕು. ಅವರಿಗೆ ಎರಡು ಆಯ್ಕೆಗಳಿವೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಮತಗಳ್ಳತನ ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್ ನಾಯಕ, ಗುರುವಾರ ಸಂಜೆ ಬಿಹಾರದಲ್ಲಿ ವಿಶೇಷ ಪರಿಷ್ಕರಣೆ ಅಥವಾ ಎಸ್‌ಐಆರ್, ಉಪರಾಷ್ಟ್ರಪತಿ ಚುನಾವಣೆ ಮತ್ತು ಇತರ ವಿಷಯಗಳ ಕುರಿತು ಚರ್ಚಿಸಲು ಕರೆಯಲಾಗಿದ್ದ ಇಂಡಿಯಾ ಒಕ್ಕೂಟದ ಡಿನ್ನರ್ ಸಭೆಯಲ್ಲಿ ಹೇಳಿಕೆಗಳನ್ನು ನೀಡಿದ್ದರು.

ಕರ್ನಾಟಕದಲ್ಲಿ ನಡೆದ ಸಮೀಕ್ಷೆಯಲ್ಲಿ ಆರು ಪ್ರಮುಖ ಅಕ್ರಮಗಳು ಬಯಲಾಗಿವೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!