ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ‘ಮ್ಯಾಚ್ ಫಿಕ್ಸಿಂಗ್’ ಹೇಳಿಕೆ ಮೂಲಕ ಚುನಾವಣೆಗೂ ಮೊದಲೇ ಬಿಹಾರದಲ್ಲಿನ ಕಾಂಗ್ರೆಸ್ ಸೋಲು ಒಪ್ಪಿಕೊಂಡಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿರುಗೇಟು ನೀಡಿದ್ದಾರೆ,
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಕ್ಕೆ ಈಗ ಎಲ್ಲೆಡೆಯಿಂದ ಆಕ್ರೋಶ, ಆಕ್ಷೇಪಗಳು ಕೇಳಿಬರುತ್ತಿದೆ. ರಾಹುಲ್ ಆರೋಪವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಪಕ್ಷದ ನಾಯಕರು ನಿರಂತರವಾಗಿ ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ಸಾಮಾಜಿಕ ಮಾಧ್ಯಮ ತಾಣದಲ್ಲಿ ರಾಹುಲ್ ಆರೋಪಗಳಿಗೆ ಸೂಕ್ತ ಉತ್ತರ ನೀಡಿ ದೀರ್ಘ ಪೋಸ್ಟ್ ಬರೆದಿದ್ದಾರೆ. ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಕೂಡ ರಾಹುಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ