ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ವಯನಾಡಿನಲ್ಲಿ ಚುನಾವಣೆ ಬಳಿಕ ರಾಹುಲ್ ಗಾಂಧಿ ಬೇರೆಡೆ ಸ್ಪರ್ಧಿಸುತ್ತಾರೆ ಎಂದು ನಾನು ಮೊದಲೇ ಹೇಳಿದ್ದೆ. ಅಮೇಥಿಯಲ್ಲೂ ಸೋಲಿನ ಭಯ ಕಂಡಿರುವ ಅವರು ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ.
ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಹುಲ್ ಗಾಂಧಿ ವಯನಾಡಿನಲ್ಲಿ ಸೋಲು ತಿಳಿದೇ ಬೇರೆ ಕ್ಷೇತ್ರಕ್ಕೆ ಹೋಗಿದ್ದಾರೆ. ಅಮೇಥಿಯಲ್ಲಿ ಹೋರಾಟ ನಡೆಸುವುದಾಗಿ ಅವರ ಬೆಂಬಲಿಗರು ಹೇಳಿದ್ದಾರೆ.
ಆದರೆ ಅವರು ಯಾವ ಕ್ಷೇತ್ರವನ್ನು ಆರಿಸಿಕೊಂಡರು? ರಾಯ್‌ಬರೇಲಿ, ಅಮೇಥಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡೊಕೆ ರಾಹುಲ್‌ಗೆ ಭಯ, ನಾನು ರಾಹುಲ್ ಗಾಂಧಿಗೆ ಹೇಳುತ್ತೇನೆ ಹೆದರಬೇಡಿ, ಓಡಿ ಹೋಗಬೇಡಿ ಎಂದು ಟೀಕಿಸಿದ್ದಾರೆ.