Monday, March 27, 2023

Latest Posts

ರಾಹುಲ್ -ಜಡೇಜಾ ಶತಕದ ಜೊತೆಯಾಟ: ಆಸೀಸ್ ವಿರುದ್ಧ ಭಾರತಕ್ಕೆ ಜಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಹೋರಾಟದಿಂದ ಭಾರತ 5 ವಿಕೆಟ್ ಗೆಲುವು ದಾಖಲಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿ ಶುಭಾರಂಭ ಮಾಡಿದೆ.

ಕೆಎಲ್ ರಾಹುಲ್ 91 ಎಸೆತದಲ್ಲಿ ಅಜೇಯ 75 ರನ್ ಸಿಡಿಸಿದರೆ, ಜಡೇಜಾ 69 ಎಸೆತದಲ್ಲಿ 45 ಅಜೇಯ ರನ್ ಸಿಡಿಸಿದರು. ಈ ಮೂಲಕ ಭಾರತ 39.5 ಓವರ್‌ಗಳಲ್ಲಿ ಗೆಲುವಿನ ದಡ ಸೇರಿತು. 5 ವಿಕೆಟ್ ಗೆಲುವು ದಾಖಲಿಸಿ ಸಂಭ್ರಮಿಸಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!