ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾಕಪ್ ಪಂದ್ಯದಲ್ಲಿ ಅಂತೂ ಇಂದು ಭಾರತ ತನ್ನ ಆಟ ಮುಂದುವರಿಸಿದ್ದು, ಪಾಕ್ ವಿರುದ್ಧ ದಿಟ್ಟ ಹೋರಾಟ ನೀಡುವಲ್ಲಿ ಯಶಸ್ವಿಯಾಗಿದೆ.
ಸೂಪರ್ 4 ಮಹತ್ವದ ಪಂದ್ಯ ಮಳೆಯಿಂದಾಗಿ ರದ್ದಾಗಿ ಮೀಸಲು ದಿನಕ್ಕೆ ಮುಂದೂಡಲ್ಪಟ್ಟಿತ್ತು. ಮೊದಲ ದಿನ ನಾಯಕ ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ ಹಾಫ್ ಸೆಂಚುರಿ ಸಿಡಿಸಿ ಮಿಂಚಿದ್ದರು. ಮೀಸಲು ದಿನದಲ್ಲಿ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿ ಮಿಂಚಿದರು. ಇದರ ಪರಿಣಾಮ ಭಾರತ 2 ವಿಕೆಟ್ ನಷ್ಟಕ್ಕೆ 356 ರನ್ ಸಿಡಿಸಿದೆ. .
ಟೀಂ ಇಂಡಿಯಾ 24.1 ಓವರ್‌ನಲ್ಲಿ 2 ವಿಕೆಟ್ ನಷ್ಟಕ್ಕೆ 147 ರನ್ ಸಿಡಿಸಿತ್ತು. ಆದರೆ ಮಳೆಯಿಂದ ಪಂದ್ಯ ಸ್ಥಗಿತಗೊಂಡು ಮತ್ತೆ ಆರಂಭಗೊಳ್ಳಲಿಲ್ಲ. ಹೀಗಾಗಿ ಪಂದ್ಯವನ್ನು ಮೀಸಲು ದಿನಕ್ಕೆ ಮುಂದೂಡಲಾಗಿತ್ತು. ಮೀಸಲು ದಿನವಾದ ಇಂದು ಪಂದ್ಯ ಆರಂಭಕ್ಕೆ ಮತ್ತೆ ಮಳೆ ಅಡ್ಡಿಯಾಗಿತ್ತು. ಹೀಗಾಗಿ ವಿಳಂಬವಾಗಿ ಪಂದ್ಯ ಆರಂಭಗೊಂಡಿತ್ತು.
ಸ್ಫೋಟಕ ಬ್ಯಾಟಿಂಗ್ ಮೂಲಕ ಮಿಂಚಿದ ಕೆಎಲ್ ರಾಹುಲ್ ತಮ್ಮ ಕಮ್‌ಬ್ಯಾಕ್ ಪಂದ್ಯದಲ್ಲೇ ಶತಕ ಸಿಡಿಸಿದ್ದಾರೆ. 100 ಎಸೆತದಲ್ಲಿ ಕೆಎಲ್ ರಾಹುಲ್ ಸೆಂಚುರಿ ಸಿಡಿಸಿ ಸಂಭ್ರಮಿಸಿದರು. ಕೆಎಲ್ ರಾಹುಲ್ 6ನೇ ಶತಕ ದಾಖಲಿಸಿದರು. ಇತ್ತ ರಾಹುಲ್ ಬೆನ್ನಲ್ಲೇ ವಿರಾಟ್ ಕೊಹ್ಲಿ ತಮ್ಮ 47ನೇ ಏಕದಿನ ಸೆಂಚುರಿ ಸಿಡಿಸಿದರು. ಕೊಹ್ಲಿ 84 ಎಸೆತದಲ್ಲಿ ಶತಕ ಸಿಡಿಸಿದ್ದಾರೆ.
ವಿರಾಟ್ ಕೊಹ್ಲಿ 94 ಎಸೆತದಲ್ಲಿ ಅಜೇಯ 124 ರನ್ ಸಿಡಿಸಿದರೆ, ರಾಹುಲ್ 106 ಎಸೆತದಲ್ಲಿ ಅಜೇಯ 111 ರನ್ ಸಿಡಿಸಿದ್ದಾರೆ. ಈ ಮೂಲಕ ಭಾರತ 2 ವಿಕೆಟ್ ನಷ್ಟಕ್ಕೆ 356 ರನ್ ಸಿಡಿಸಿತು.