ಹೊಸದಿಗಂತ ಆನ್ ಲೈನ್ ಡೆಸ್ಕ್:
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ನ 11ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ಗೆ 196 ರನ್ಗಳ ಟಾರ್ಗೆಟ್ ನೀಡಿದೆ. ಟಾಸ್ ಗೆದ್ದ ಡೆಲ್ಲಿ ನಾಯಕ ರಿಷಭ್ ಪಂತ್ ಮೊದಲು ಬೌಲಿಂಗ್ ಆಯ್ದುಕೊಂಡ ಕಾರಣ ಬ್ಯಾಟಿಂಗ್ ಇಳಿದ ಪಂಜಾಬ್ ತಂಡಕ್ಕೆ, ನಾಯಕ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಉತ್ತಮ ಆರಂಭ ನೀಡಿದರು.
ಇಬ್ಬರು ಬಿರುಸಿನ ಬ್ಯಾಟಿಂಗ್ ಮಾಡುವ ಮೂಲಕ ರನ್ ಗಳಿಕೆ ವೇಗವನ್ನು ಹೆಚ್ಚಿಸುತ್ತಾ ಹೋದರು. 36 ಎಸೆತಗಳಲ್ಲಿ 4 ಸಿಕ್ಸ್, 7 ಬೌಂಡರಿ ಒಳಗೊಂಡ 69 ರನ್ ಗಳಿಸಿದ ವೇಳೆ ಮಯಾಂಕ್ ಶಿಖರ್ ಧವನ್ಗೆ ಕ್ಯಾಚ್ ನೀಡಿದರು.
ಇನ್ನೊಂದೆಡೆ ಕೆಎಲ್ ರಾಹುಲ್ 45 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. 61 ಗಳಿಸಿ ಕ್ಯಾಚ್ ನೀಡಿ ನಿರ್ಗಮಿಸಿದರು. ನಾಯಕನ ಬೆನ್ನಲ್ಲೇ ಕ್ರಿಸ್ ಗೇಲ್ ಕೂಡ 11 ರನ್ಗಳಿಸಿ ಔಟಾದರು.
ಈ ಹಂತದಲ್ಲಿ ಜೊತೆಗೂಡಿದ ದೀಪಕ್ ಹೂಡಾ ಹಾಗೂ ನಿಕೋಲಸ್ ಪೂರನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.19ನೇ ಓವರ್ನಲ್ಲಿ 9 ರನ್ ನೀಡಿದ ಅವೇಶ್ ಖಾನ್ ನಿಕೋಲಸ್ ಪೂರನ್ (9) ವಿಕೆಟ್ ಪಡೆದರು.ಕ್ರಿಸ್ ವೋಕ್ಸ್ ಎಸೆದ 20ನೇ ಓವರ್ನಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಬಾರಿಸಿದ ಶಾರುಖ್ ಖಾನ್ ತಂಡದ ಮೊತ್ತವನ್ನು 4 ವಿಕೆಟ್ ನಷ್ಟಕ್ಕೆ 195ಕ್ಕೆ ತಂದು ನಿಲ್ಲಿಸಿದರು.