ಮಹಾರಾಷ್ಟ್ರ ವಿಧಾನ ಸಭೆಗೆ ನೂತನ ಸ್ಪೀಕರ್‌ ಆಗಿ ರಾಹುಲ್‌ ನಾರ್ವೇಕರ್‌ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಮರಳಿದ ಕೆಲವೇ ದಿನಗಳಲ್ಲಿ, ಮೊದಲ ಬಾರಿ ಬಿಜೆಪಿ ಶಾಸಕರಾಗಿರುವ ರಾಹುಲ್ ನಾರ್ವೇಕರ್ ಅವರು ಭಾನುವಾರ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಸದನದ ಕಲಾಪ ಆರಂಭವಾದ ಬಳಿಕ ಸ್ಪೀಕರ್‌ ಸ್ಥಾನಕ್ಕೆ ಚುನಾವಣೆ ನಡೆದಿದ್ದು ನಾರ್ವೇಕರ್ ಅವರು ವಿಧಾನಸಭೆಯಲ್ಲಿ 164 ಮತಗಳನ್ನು ಪಡೆಯುವ ಮೂಲಕ ನೂತನ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.

ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದ ಉದ್ಧವ್‌ ಠಾಕ್ರೆ ನಿಷ್ಠಾವಂತ ರಾಜನ್‌ ಸಾಲ್ವಿ ಅವರನ್ನು ಸ್ಪೀಕರ್‌ ಚುನಾವಣೆಗೆ ಅವರನ್ನು ಕಣಕ್ಕಿಳಿಸಲಾಗಿತ್ತು

ಕಾಂಗ್ರೆಸ್‌ನ ನಾನಾ ಪಟೋಲೆ ರಾಜೀನಾಮೆ ನೀಡಿದ ನಂತರ ಕಳೆದ ವರ್ಷ ಫೆಬ್ರವರಿಯಿಂದ ಸ್ಪೀಕರ್ ಹುದ್ದೆ ಖಾಲಿಯಾಗಿತ್ತು. ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರು ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ನಾಳೆ ಏಕನಾಥ್‌ ಶಿಂಧೆ ವಿಶ್ವಾಸಮತ ಯಾಚನೆ
ಅಧಿಕಾರ ವೇರಿ ನಾಲ್ಕು ದಿನ ಪೂರೈಸಿರುವ ಶಿವಸೇನೆ-ಬಿಜೆಪಿ ಸರ್ಕಾರವು ವಿಧಾನಸಭೆಯ ಎರಡು ದಿನಗಳ ವಿಶೇಷ ಅಧಿವೇಶನದಲ್ಲಿ ಸೋಮವಾರ (ನಾಳೆ) ವಿಶ್ವಾಸಮತ ಪರೀಕ್ಷೆಯನ್ನು ಎದುರಿಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!