ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜಾರಿ ನಿರ್ದೇಶನಾಲಯ(ED)ದ ಉಸ್ತುವಾರಿ ನಿರ್ದೇಶಕರಾಗಿರುವ ಹಿರಿಯ ಐಆರ್‌ಎಸ್ ಅಧಿಕಾರಿ ರಾಹುಲ್ ನವೀನ್ ಅವರನ್ನು ಪೂರ್ಣಾವಧಿ ನಿರ್ದೇಶಕರನ್ನಾಗಿ ನೇಮಿಸಿದೆ.
ಅಕ್ರಮ ಹಣ ವರ್ಗಾವಣೆ ವಿರೋಧಿ ಸಂಸ್ಥೆ ಇಡಿಯ ನಿರ್ದೇಶಕರಾಗಿ ಎರಡು ವರ್ಷಗಳ ಕಾಲ ರಾಹುಲ್ ನವೀನ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
1984ರ ಬ್ಯಾಚ್‌ನ ಐಆರ್‌ಎಸ್ ಅಧಿಕಾರಿ ಸಂಜಯ್ ಕುಮಾರ್ ಮಿಶ್ರಾ (ಹಾಲಿ ನಿರ್ದೇಶಕ) ಅವರ ಅಧಿಕಾರಾವಧಿ ಪೂರ್ಣಗೊಂಡ ನಂತರ 1993 ಬ್ಯಾಚ್‌ನ ಐಆರ್‌ಎಸ್ ಅಧಿಕಾರಿ ರಾಹುಲ್ ನವೀನ್ ಇಡಿ ಯ ಹಂಗಾಮಿ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ ಅವರನ್ನು ಪೂರ್ಣಾವಧಿ ನಿರ್ದೇಶಕರಾಗಿ ನೇಮಿಸಲಾಗಿದೆ.