ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯಾಷನಲ್ ಹೆರಾಲ್ಡ್ ಪ್ರಕರಣ ಈಗ ಡಿಕೆ ಬ್ರದರ್ಸ್ ತಲೆಗೆ ಬಂದಿದೆ. ಯಂಗ್ ಇಂಡಿಯಾಗೆ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ 2.5 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ ಇಡಿ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಿದ್ದು ಡಿಕೆ ಬ್ರದರ್ಸ್ ಹೆಸರು ಉಲ್ಲೇಖವಾಗಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ 142 ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಇಡಿ ಈ ಮೊದಲು ಆರೋಪಿಸಿತ್ತು.
ಹೈಕಮಾಂಡ್ ಸೂಚನೆ ಮೇರೆಗೆ ದೇಣಿಗೆ ನೀಡಲಾಗಿದೆ ಎಂದು ಇಡಿ ಆರೋಪಿಸಿದೆ.