ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕನ್ನಡಿಗ ರಾಹುಲ್ ಹಾಗು ಟ್ರಿಸ್ಟಾನ್ ಸ್ಟಬ್ಸ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ಗಳ ರೋಚಕ ಜಯ ಸಾಧಿಸಿದೆ.
ಬೆಂಗಳೂರಿನಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 175 ರನ್ಗಳ ಸಾಧಾರಣ ಮೊತ್ತ ದಾಖಲಿಸಿತ್ತು.
176 ರನ್ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಗೆ ಆರಂಭದಲ್ಲೇ ಭುವನೇಶ್ವರ್ ಕುಮಾರ್ ಶಾಕ್ ನೀಡಿದ್ದು, ಪ್ರಮುಖ ಮೂವರು ಬ್ಯಾಟ್ಸ್ ಮ್ಯಾನ್ ಗಳು ಪೆವಿಲಿಯನ್ ಸೇರಿದರು.
ಬಳಿಕ ರಾಹುಲ್ ಜೊತೆ ಸೇರಿದ ಟ್ರಿಸ್ಟಾನ್ ಸ್ಟಬ್ಸ್ ಭರ್ಜರಿ ಬ್ಯಾಟಿಂಗ್ ನಿಂದಾಗಿ ತಂಡದ ರನ್ ಮೊತ್ತ ಹೆಚ್ಚಾಯಿತು. ರಾಹುಲ್ 34 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್ಗಳ ಸಹಿತ 57 ರನ್ಗಳಿಸಿ ಔಟ್ ಆದರು. ಬಳಿಕ ಅಕ್ಷರ್ ಪಟೇಲ್ 5ನೇ ವಿಕೆಟ್ಗೆ ಸ್ಟಬ್ಸ್ ಜೊತೆಗೂಡಿ 47 ರನ್ ಸೇರಿಸಿ ರಿಟೈರ್ಡ್ ಔಟ್ ಆದರು. ಅಂತಿಮವಾಗಿ ಡೇವಿಡ್ ಮಿಲ್ಲರ್ ಹಾಗೂ ಟ್ರಿಸ್ಟಾನ್ ಸ್ಟಬ್ಸ್ ತಂಡವನ್ನು ಗೆಲುವಿನ ದಡ ಸೇರಿಸಿದರು. ಟ್ರಿಸ್ಟಾನ್ ಸ್ಟಬ್ಸ್ 60 ಮಿಲ್ಲರ್ 22 ರನ್ ಗಳಿಸಿ ಅಜೇಯರಾಗಿ ಉಳಿದರು.



