ರಾಹುಲ್ ಪದಚ್ಯುತಿ: ಸಂಸತ್‌ನಲ್ಲಿ ಕಪ್ಪು ಬಟ್ಟೆ ಧರಿಸಿ ಬಂದ ಕೈ ಸಂಸದರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಲು ಇಂದು ಕಾಂಗ್ರೆಸ್ ಕಾರ್ಯಕರ್ತರು ಸದಕ್ಕೆ ಕಪ್ಪು ಬಟ್ಟೆ ಧರಿಸಿ ಬಂದಿದ್ದಾರೆ.

ಸಂಜೆ ನಾಲ್ಕು ಗಂಟೆವರೆಗೆ ಕಲಾಪ ಮುಂದೂಡಲಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಪ್ಪು ಬಟ್ಟೆ ಧರಿಸಿ ಬಂದಿದ್ದರು. ಲೋಕಸಭೆಯಿಂದ ರಾಹುಲ್ ಗಾಂಧಿ ಅನರ್ಹತೆ ಹಾಗೂ ಅದಾನಿ ವಿಷಯಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿ ಎಲ್ಲೆಡೆ ಪ್ರತಿಭಟನೆ ನಡೆಸಿದ್ದಾರೆ.

ರಾಹುಲ್ ಗಾಂಧಿ ಮೋದಿ ಉಪನಾಮದ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಸೂರತ್ ನ್ಯಾಯ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು. ಜತೆಗೆ ಎರಡು ವರ್ಷದ ಜೈಲು ಶಿಕ್ಷೆ ವಿಧಿಸಿತ್ತು. ಇದೀಗ 30 ದಿನಗಳ ಜಾಮೀನಿನ ಮೇಲೆ ರಾಗಾ ಹೊರಗಿದ್ದಾರೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!