ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಯಚೂರು ಜಿಲ್ಲೆಯ ಸಿರವಾರದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ.
ಸಿರವಾರದಲ್ಲಿ ಪಿಡಿಒ ಆಗಿ ಪ್ರವೀಣ್ ಕಾರ್ಯನಿರ್ವಹಿಸುತ್ತಿದ್ದರು. ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಾರಣ ಪ್ರವೀಣ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ.
ಪಿಡಿಓ ಪ್ರವೀಣ್ ಕುಮಾರ್ ಆರ್ ಎಸ್ ಎಸ್ ನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸಮವಸ್ತ್ರ ಧರಿಸಿ ಪಥ ಸಂಚಲನದಲ್ಲಿ ಭಾಗಿಯಾಗಿದ್ದರು.