ಬಿಹಾರದ 3 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ: 4 ಕೋಟಿಗೂ ಅಧಿಕ ನಗದು ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಬಿಹಾರದ ಮೂವರು ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ವಿಜಿಲೆನ್ಸ್ ಇನ್ವೆಸ್ಟಿಗೇಶನ್ ಬ್ಯೂರೋ (ವಿಐಬಿ) ದಾಳಿ ನಡೆಸಿದ್ದು 4 ಕೋಟಿ ರೂಪಾಯಿಗೂ ಅಧಿಕ ನಗದು ಪತ್ತೆಯಾಗಿದೆ.

ಲೋಕೋಪಯೋಗಿ ಇಲಾಖೆಯ ಕಿಶನ್‌ಗಂಜ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಸಂಜಯ್ ಕುಮಾರ್ ರೈ ಅವರಿಗೆ ಸಂಬಂಧಿಸಿದ ಬಿಹಾರದ ಪಾಟ್ನಾ ಮತ್ತು ಕಿಶನ್‌ಗಂಜ್‌ನಲ್ಲಿ ವಿಐಬಿ ಅಧಿಕಾರಿಗಳ ತಂಡಗಳು ಏಕಕಾಲದಲ್ಲಿ ದಾಳಿ ನಡೆಸಿವೆ.

ತನಿಖೆಯ ವೇಳೆ ಸಂಜಯ್‌ ಕುಮಾರ್‌ ಅವರು ಹೆಚ್ಚಿನ ಹಣವನ್ನು ತಮ್ಮ ಅಡಿಯಲ್ಲಿ ಜೂನಿಯರ್ ಇಂಜಿನಿಯರ್ ಮತ್ತು ಕ್ಯಾಷಿಯರ್‌ನ ಆವರಣದಲ್ಲಿ ಇಟ್ಟುಕೊಂಡಿರುವ ವಿಷಯ ತಿಳಿದಿದೆ. ಇದರ ಬೆನ್ನಲ್ಲೇ ತಂಡಗಳು ರೈ ಅವರ ಅಧೀನ ಅಧಿಕಾರಿಗಳ ಮೇಲೆ ದಾಳಿ ನಡೆಸಿವೆ.

ಕಿಶನ್‌ಗಂಜ್‌ನಲ್ಲಿರುವ ಕ್ಯಾಷಿಯರ್‌ನ ಆವರಣದಲ್ಲಿ ತಪಾಸಣೆ ನಡೆಸಿದಾಗ 3 ಕೋಟಿ ರೂಪಾಯಿಗೂ ಹೆಚ್ಚು ನಗದು ವಶಪಡಿಸಿಕೊಳ್ಳಲಾಗಿದೆ. ಅದೇ ಸಮಯದಲ್ಲಿ, ಸಂಜಯ್ ಕುಮಾರ್ ರೈ ಅವರ ಪಾಟ್ನಾ ನಿವಾಸದಿಂದ ಸುಮಾರು 1 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.

ಸದ್ಯ ದಾಳಿ ನಡೆಯುತ್ತಿದ್ದು, ನಗದು ಎಣಿಕೆ ಯಂತ್ರಗಳನ್ನು ತರಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಖಾಸಗಿ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!