Monday, August 8, 2022

Latest Posts

ಭಯೋತ್ಪಾದನೆಗೆ ಆರ್ಥಿಕ ನೆರವು: ಕಾಶ್ಮೀರದ ಹಲವೆಡೆ ಎನ್ಐಎ ದಾಳಿ, ಐವರ ಬಂಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ 5 ಮಂದಿಯನ್ನು ಬಂಧಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಶ್ರೀನಗರ, ಅನಂತ್‌ನಾಗ್, ಬಾರಾಮುಲ್ಲಾ ಸೇರಿದಂತೆ 10 ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿದ್ದು, ಈ ವೇಳೆ 5 ಮಂದಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ತನಿಖಾ ಸಂಸ್ಥೆ ಭಯೋತ್ಪಾದಕ ಸಂಘಟನೆಗಳ ಜೊತೆಗಿನ ಹಣೆ ವರ್ಗಾವಣೆ ನಡೆಸಿರುವುದರ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಿನ್ನೆಯಷ್ಟೆ ಹುಜ್ವುಲ್ ಮುಜಾಹಿದ್ದೀನ್ ಸಂಘಟನೆಯ ಮುಖ್ಯಸ್ಥರ ಪುತ್ರರು, ಭಯೋತ್ಪಾದಕರು ಸೇರಿದಂತೆ 11 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss