Saturday, October 11, 2025

ದೀಪಾವಳಿಗೆ ರೈಲ್ವೆ ಇಲಾಖೆ ಗಿಫ್ಟ್: ಬೆಂಗಳೂರಿನಿಂದ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣ ನಡುವೆ ಓಡಲಿವೆ ವಿಶೇಷ ರೈಲು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈರುತ್ಯ ರೈಲ್ವೆಯು ಬೆಂಗಳೂರಿನಿಂದ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ರೈಲು ಸಂಖ್ಯೆ 06255 ಕೆಎಸ್‌ಆರ್ ಬೆಂಗಳೂರು-ಚೆನ್ನೈ ಸೆಂಟ್ರಲ್ ವಿಶೇಷ ಎಕ್ಸ್‌ಪ್ರೆಸ್ ಇದೇ 18, 21 ಮತ್ತು 25ರಂದು ಬೆಂಗಳೂರಿನಿಂದ ಹೊರಟು ಮಧ್ಯಾಹ್ನ ಚೆನ್ನೈ ತಲುಪಲಿದೆ.

ರೈಲು ಸಂಖ್ಯೆ 16256 ಎಂಜಿಆರ್ ಚೆನ್ನೈ ಸೆಂಟ್ರಲ್ – ಕೆಎಸ್‌ಆರ್ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಇದೇ 18, 21 ಮತ್ತು 25 ರಂದು ಸಂಜೆ4:30 ಕ್ಕೆ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಟು, ಅದೇ ದಿನ ರಾತ್ರಿ 10:45ಕ್ಕೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣ ತಲುಪಲಿದೆ.

error: Content is protected !!