ಹೊಸದಿಗಂತ ವರದಿ ಹುಬ್ಬಳ್ಳಿ:
ತಾಲೂಕಿನ ಕುಸುಗಲ್ ಹಾಗೂ ಬ್ಯಾಹಟ್ಟಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಮಧ್ಯೆ ಬೈಕ್ ಸವಾರನ ಮೇಲೆ ಬಸ್ ಹರಿದು ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದ ನಿವಾಸಿ ರೈಲ್ವೆ ನೌಕರರ ಬಸವರಾಜ ಹನಸಿ (೪೫) ಮೃತಪಟ್ಟಿದ್ದಾರೆ.
ಶನಿವಾರ ಬೆಳಿಗ್ಗೆ ಅಳಗವಾಡಿಯಿಂದ ಹುಬ್ಬಳ್ಳಿ ಕೆಲಸಕ್ಕೆ ಹೋಗುವಾಗ ದ್ವಿಚಕ್ರ ವಾಹನದ ಚಾಲಕ ಬಸವರಾಜ ಬಸ್ ವೊಂದನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾರೆ. ಆಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಾಗ ಬಸ್ ಹರಿದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಮೃತ ದೇಹವನ್ನು ನಗರದ ಕೆಎಂಸಿಆರ್ ಐ ಆಸ್ಪತ್ರೆ ರವಾನಿಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.