ರೈಲ್ವೆ ನಿಲ್ದಾಣದ ಮೇಲೆ ಬಂದೂಕುಧಾರಿಗಳಿಂದ ದಾಳಿ: 30ಕ್ಕೂ ಹೆಚ್ಚು ಮಂದಿ ಅಪಹರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೈಜೀರಿಯಾದ ರೈಲ್ವೆ ನಿಲ್ದಾಣದ ಮೇಲೆ ಬಂದೂಕುಧಾರಿಗಳು ದಾಳಿ ಮಾಡಿದ್ದು, 30 ಕ್ಕೂ ಹೆಚ್ಚು ಮಂದಿಯನ್ನು ಅಪಹರಿಸಿದ್ದಾರೆ. ನೈಜೀರಿಯಾದ ದಕ್ಷಿಣ ಇಡೋ ರಾಜ್ಯದ ರೈಲು ನಿಲ್ದಾಣದಲ್ಲಿ ಗುಂಡಿನ ದಾಳಿ ನಡೆಸಿದ್ದು, ಸಾಕಷ್ಟು ಮಂದಿ ಗಾಯಗೊಂಡಿದ್ದಾರೆ.

ಎಕೆ-47 ರೈಫಲ್‌ಗಳನ್ನು ಹೊಂದಿದ್ದ ಬಂದೂಕುಧಾರರು ಗುಂಡಿನ ದಾಳಿ ನಡೆಸಿದ್ದು, ಯಾವ ಕಾರಣಕ್ಕೆ ಈ ರೀತಿ ಮಾಡಿದ್ದಾರೆ ಮಾಹಿತಿ ಲಭ್ಯವಾಗಿಲ್ಲ.

ಫೆಬ್ರವರಿಯಲ್ಲಿ ರಾಷ್ಟ್ರಪತಿ ಚುನಾವಣೆ ಮುನ್ನ ಈ ರೀತಿ ದಾಳಿ ನಡೆದಿರುವುದು ಸರ್ಕಾರಕ್ಕೆ ಸವಾಲಾಗಿದೆ. ರೈಲಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ದಾಳಿ ನಡೆಸಿದ್ದು, 32 ಮಂದಿಯನ್ನು ಕಿಡ್ನಾಪ್ ಮಾಡಿದ್ದಾರೆ. ಅದರಲ್ಲಿ ಒಬ್ಬರು ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ.

ಅಪರಹಣಕ್ಕೊಳಗಾದ ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ ಎಂದು ಪೊಲೀಸರು ಭರವಸೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!