ಉದಯಪುರದಲ್ಲಿ ರೈಲ್ವೆ ಟ್ರ್ಯಾಕ್ ಸ್ಫೋಟ: ಪೊಲೀಸರಿಂದ ತನಿಖೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉದಯ್‌ಪುರ-ಅಹಮದಾಬಾದ್‌ ರೈಲೈ ಟ್ರ್ಯಾಕ್‌ ಅನ್ನು ದುಷ್ಕರ್ಮಿಗಳು ಸ್ಫೋಟಿಸಿದ್ದು, ಹೀಗಾಗಿ ಡುಂಗರ್‌ಪುರದಲ್ಲಿ ರೈಲನ್ನು ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೇ ವಕ್ತಾರರು ತಿಳಿಸಿದ್ದಾರೆ.

ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 31 ರಂದು ಈ ಮಾರ್ಗವನ್ನು ಉದ್ಘಾಟಿಸಿದ್ದರು.
ಇದೀಗ ಘಟನೆ ಬೆನ್ನಲ್ಲೇ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ವಿಸ್ತೃತ ತನಿಖೆಗಾಗಿ ಪೊಲೀಸ್ ಮಹಾನಿರ್ದೇಶಕ ಉಮೇಶ್ ಮಿಶ್ರಾ ಅವರಿಗೆ ಸೂಚನೆ ನೀಡಿದ್ದಾರೆ .

ಸ್ಥಳೀಯರು ಬೆಳಗ್ಗೆ ಸ್ಫೋಟದ ಬಗ್ಗೆ ನಮಗೆ ಮಾಹಿತಿ ನೀಡಿದರು. ನಾವು ಟ್ರ್ಯಾಕ್‌ನಲ್ಲಿ ಕೆಲವು ಸ್ಫೋಟಕಗಳನ್ನು ಪತ್ತೆ ಹಚ್ಚಿದ್ದೇವೆ. ಕೃತ್ಯವೆಸಗಿದ ಆರೋಪಿಗಳನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಜವರ್ ಮೈನ್ಸ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಅನಿಲ್ ಕುಮಾರ್ ವಿಷ್ಣೋಯ್ ತಿಳಿಸಿದ್ದಾರೆ.

ಘಟನೆ ನಡೆದ ಬೆನ್ನಲ್ಲೇ ರಾಜಸ್ಥಾನ ಪೊಲೀಸ್‌ನ ಭಯೋತ್ಪಾದಕ ನಿಗ್ರಹ ಘಟಕ ಸ್ಥಳಕ್ಕೆ ಆಗಮಿಸಿದೆ. ಭಯೋತ್ಪಾದಕ ಸಂಚಿನ ಕೋನದಿಂದ ಎಟಿಎಸ್‌ ತನಿಖೆ ಮಾಡಲಿದೆ. ಬಾಂಬ್ ಸ್ಕ್ವಾಡ್ ಮತ್ತು ಫೊರೆನ್ಸಿಕ್ ತಂಡ ಸ್ಥಳಕ್ಕೆ ಧಾವಿಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಹಲವೆಡೆ ಕಬ್ಬಿಣದ ಹಳಿಗಳು ಮುರಿದು ಹೋಗಿದ್ದವು. ಸೇತುವೆಯ ಮೇಲಿನ ಸಾಲಿನಲ್ಲಿ ನಟ್-ಬೋಲ್ಟ್‌ಗಳು ಕೂಡ ಕಾಣೆಯಾಗಿವೆ.

ಈ ಮಾರ್ಗದ ಎರಡೂ ರೈಲುಗಳ ಸಂಚಾರವನ್ನು ರೈಲ್ವೆ ಸ್ಥಗಿತಗೊಳಿಸಲಾಗಿದೆ. ರೈಲು ಮಾರ್ಗ ದುರಸ್ತಿ ಕಾರ್ಯ ನಡೆಯುತ್ತಿದೆ. ಸದ್ಯ, ರೈಲುಗಳು ಯಾವಾಗ ಮತ್ತೆ ಪ್ರಾರಂಭವಾಗುತ್ತವೆ ಎಂಬ ಬಗ್ಗೆ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!