ರೈಲ್ವೆ ಹಳಿ ಪಕ್ಕ ರೀಲ್ಸ್ ಮಾಡುವಾಗ ಯುವಕನಿಗೆ ಗುದ್ದಿದ ರೈಲು!

ಹೊಸ ದಿಗಂತ ಡಿಜಿಟಲ್ ಡೆಸ್ಕ್ :

ಸೋಷಿಯಲ್ ಮೀಡಿಯಾದಲ್ಲಿ ಖ್ಯಾತಿಯಾಗಲು ಯುವಕ-ಯುವತಿಯರು ಹುಚ್ಚು ಸಾಹಸ ಮಾಡಲು ಹೋಗಿ ಪ್ರಾಣಕ್ಕೆ ಕುತ್ತು ತಂದುಕೊಂಡ ಘಟನೆಗಳು ನಡೆಯುತ್ತಿವೆ. ಇದೇ ರೀತಿ ತೆಲಂಗಾಣದ ಹನುಮಕೊಂಡ ಜಿಲ್ಲಾ ಕೇಂದ್ರದಲ್ಲಿ ಯುವಕನೊಬ್ಬ ಹುಚ್ಚಾಟ ಮಾಡಲು ಹೋಗಿ ಪ್ರಾಣವನ್ನೇ ಪಣಕ್ಕಿಟ್ಟಿದ್ದಾನೆ.
ರೀಲ್ಸ್​ ಮಾಡಲು ಯುವಕ ರೈಲ್ವೆ ಹಳಿ ಪಕ್ಕ ನಡೆದುಕೊಂಡು ಹೋಗಿದ್ದಾನೆ. ಇದನ್ನು ಮೂವರು ಸ್ನೇಹಿತರು ವಿಡಿಯೋ ಮಾಡುತ್ತಿದ್ದರು. ಈ ವೇಳೆ ರಭಸವಾಗಿ ಬಂದ ರೈಲು ಯುವಕನಿಗೆ ತಾಗಿಕೊಂಡು ಹೋಗಿದೆ. ಇದರಿಂದ ಯುವಕ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಸ್ನೇಹಿತರು ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!