ಹೊಸದಿಗಂತ ಡಿಜಿಟಲ್ ಡೆಸ್ಕ್:
ತಡರಾತ್ರಿ ಭಾರೀ ಮಳೆ ಸುರಿದಿದ್ದು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕೆರೆಯಂತಾಗಿದೆ. ರಾಮನಗರದ ಸಂಗಬಸವನದೊಡ್ಡಿ ಮೇಲ್ಸೇತುವೆ ಹೆದ್ದಾರಿ ಬಳಿ ನೀರು ನಿಂತು ಸಂಪೂರ್ಣ ಜಲಾವೃತವಾಗಿದೆ.
ಮಳೆಯಿಂದಾಗಿ ವಾಹನ ಸವಾರರು ಪರದಾಡುವ ಸ್ಥಿತಿ ಏರ್ಪಾಡಾಗಿದ್ದು, ಸಾರ್ವಜನಿಕರು ಗರಂ ಆಗಿದ್ದಾರೆ.
ನಿನ್ನೆಯಷ್ಟೇ ರಾಮನಗರ ತಾಲೂಕಿನ ಬಸವನಪುರ ಬಳಿ ಮೇಲ್ಸೇತುವೆ ತಡೆಗೋಡೆಗೆ ಲಾರಿ ಡಿಕ್ಕಿ ಹೊಡೆದಿದ್ದು, ಲಾರಿ ಹಾಗೂ ಕಾರ್ ಚಾಲಕ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರು.