ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಒಂದು ಗಂಟೆ ಸುರಿದ ಮಳೆಗೆ ಇಡೀ ಊರೇ ಅಸ್ತವ್ಯಸ್ತವಾಗಿದೆ.
ಇನ್ನೂ 24 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಗದಗ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.