spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ತಡರಾತ್ರಿ ಬೆಂಗಳೂರಿನಲ್ಲಿ ವರುಣನ ಆರ್ಭಟ: ಇಂದು, ನಾಳೆ ಕೂಡ ಜೋರು ಮಳೆ

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಇಂದು ಮತ್ತು ನಾಳೆ ಕೂಡ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದ ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ವಾರ ಭಾರೀ ಮಳೆಯಾಗಿದ್ದು, ಬುಧವಾರ ಮಳೆಯ ಅಬ್ಬರ ಕಡಿಮೆಯಾಗಿತ್ತು. ಆದರೆ ಮತ್ತೆ ಭಾನುವಾರ ರಾತ್ರಿ 11.30ರ ಬಳಿಕ ನಗರದಲ್ಲಿ ಗುಡುಗು ಸಹಿತ ಮಳೆಯಾಗಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕ ಮಾತ್ರವಲ್ಲದೆ ಅಸ್ಸಾಂ, ಮೇಘಾಲಯ, ಉತ್ತರ ಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಲಕ್ಷದ್ವೀಪ ದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss