ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಇಂದು ಮಳೆಯಾಗುವ ಮುನ್ಸೂಚನೆ ಇದೆ.
ರಾಜ್ಯದಲ್ಲಿ ಇಂದಿನಿಂದ ಡಿ. 3ರವರೆಗೆ ಮಳೆ ಮುಂದುವರೆಯಲಿದೆ. ಕಳೆದ ವಾರ ಸುರಿದ ಭಾರೀ ಮಳೆಗೆ ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಕರ್ನಾಟಕ ರಾಜ್ಯಗಳು ತತ್ತರಿಸಿ ಹೋಗಿವೆ.