Monday, August 15, 2022

Latest Posts

ಸೆ.28ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಯಾವ್ಯಾವ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರೀ ಮಳೆ?

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದ್ದು, ಸೆ.28ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಧಾರವಾಡ, ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಹಾಸನ, ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss