spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉಡುಪಿಯಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ

- Advertisement -Nitte

ಹೊಸದಿಗಂತ ವರದಿ, ಉಡುಪಿ:

ಮುಂಗಾರು ಅಂತ್ಯದ ಅವಧಿಯಲ್ಲಿ ರಾಜ್ಯದಲ್ಲಿ ಭಾರೀ ವರ್ಷಧಾರೆಯಾಗುತ್ತಿದೆ. ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಐರೋಡಿ ಗ್ರಾಮದಲ್ಲಿ ಗರಿಷ್ಠ 30.4 ಸೆಂ.ಮೀ. ಮಳೆ ದಾಖಲಾಗಿದೆ.
ಉಡುಪಿ ಜಿಲ್ಲೆಯ 20 ಗ್ರಾಮಗಳಲ್ಲಿ 14 ಸೆಂ.ಮೀ.ಗಿಂತ ಅಧಿಕ ಮಳೆಯಾಗಿದೆ. ಬಾರ್ಕೂರು 29.01, ಕುರ್ಕಾಲು 26.34, ಉಡುಪಿ 24.4, ಕುಂಜಾಲು 23.44, ಪಾಂಡೇಶ್ವರ 22.86, ತೆಂಕನಿಡಿಯೂರು 22.43, ನೀಲಾವರ 21.75, ಬ್ರಹ್ಮಾವರ 21.15 ಸೆಂ.ಮೀ. ಮಳೆ ಬಿದ್ದಿದೆ.
ಪರಿಣಾಮ ಜಿಲ್ಲೆಯ ಉಡುಪಿ, ಬ್ರಹ್ಮಾವರ ಮತ್ತು ಕಾಪು ತಾಲೂಕಿನಲ್ಲಿ ನದಿ, ಹೊಳೆಗಳು ಮೈದುಂಬಿ ಹರಿಯುತ್ತಿವೆ. ಇದರಿಂದ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ನೆರೆ ಉಂಟಾಗಿತ್ತು. ಬೆಳಗ್ಗೆಯಿಂದ ಮಳೆಯ ತೀವ್ರತೆ ಕಡಿಮೆಯಾಗಿದ್ದು, ನೆರೆ ನೀರು ಇಳಿಯುತ್ತಿದೆ. ಆದರೆ ರಾತ್ರಿ ಮತ್ತೆ ನಿರಂತರ ಮಳೆಯಾದರೆ ನೆರೆ ಸಂಭವಿಸುವ ಆತಂಕವಿದೆ.
ಉಡುಪಿ ಜಿಲ್ಲೆಯಲ್ಲಿ ಇನ್ನೆರಡು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಸದ್ಯ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣದೊಂದಿಗೆ ಆಗಾಗ್ಗೆ ಮಳೆಯಾಗುತ್ತಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss