ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂದು ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವೆ ನಡೆಯಬೇಕಿದ್ದ ಪಂದ್ಯ ಮಳೆಯಿಂದಾಗಿ ರದ್ದಾಗಿದೆ.
ರಾವಲ್ಪಿಂಡಿಯಲ್ಲಿ ಮಳೆಯಿಂದಾಗಿ ಟಾಸ್ ಕೂಡ ನಡೆಯದೆ ಅಂತ್ಯಗೊಂಡಿದೆ. ಇದರಿಂದ ಪಾಕಿಸ್ತಾನ ಯಾವುದೇ ಪಂದ್ಯವನ್ನು ಗೆಲ್ಲದೆ ಟೂರ್ನಿಯಿಂದ ಹೊರಬಿದ್ದಿದೆ.
29 ವರ್ಷಗಳ ನಂತರ, ಐಸಿಸಿ ಪಂದ್ಯಾವಳಿಯನ್ನು ಆಯೋಜಿಸುವ ಅವಕಾಶ ಪಡೆದಿದ್ದ ಪಾಕಿಸ್ತಾನ ಕೇವಲ 8 ದಿನಗಳಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಿದೆ.
ಕಳೆದ ಕೆಲವು ದಿನಗಳಿಂದ ಪಾಕಿಸ್ತಾನದಲ್ಲಿ ಮಳೆ ಸುರಿಯುತ್ತಿದೆ. ಹೀಗಾಗಿ ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೂ ಮುನ್ನ ನಡೆದಿದ್ದ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಪಂದ್ಯವನ್ನು ಮಳೆಯಿಂದ ರದ್ದುಗೊಳಿಸಲಾಗಿತ್ತು. ಆ ಪಂದ್ಯವೂ ಕೂಡ ಟಾಸ್ ಕೂಡ ನಡೆಯದೆ ರದ್ದಾಗಿತ್ತು. ಇದೀಗ ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವೂ ಮಳೆಯಿಂದಾಗಿ ಟಾಸ್ ಕೂಡ ನಡೆಯದೆ ಅಂತ್ಯಗೊಂಡಿದೆ.