ರಾಜ್ಯದಲ್ಲಿ ಇಂದಿನಿಂದ ಐದು ದಿನ ಮಳೆಯೋ ಮಳೆ, ಸಿಕ್ಕಾಪಟ್ಟೆ ಥಂಡಿ ಗಾಳಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದ ಹಲವೆಡೆ ಇಂದಿನಿಂದ ಏ.16ರ ವರೆಗೆ ಭಾರೀ ಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಗಾಳಿ ಪ್ರತಿ ಗಂಟೆಗೆ 40-50 ಕಿಮಿ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಇಂದು ನಾಳೆ ಹಗುರ ಮಳೆಯಾಗಲಿದೆ. ನಗರದ ಕೆಲವೆಡೆ ಮೋಡಕವಿದ ವಾತಾವರಣ ಇದ್ದು, ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!