ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಆಯ್ದ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರೀ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯ ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ಇಂದು ರಜೆ ಘೋಷಿಸಿದೆ. ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಬೇಕು, ಕಾರ್ಯ ನಿರ್ವಹಿಸಲು, ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದಲ್ಲಿ ಆ ಮಕ್ಕಳಿಗೆ ಒಂದು ದಿನ ರಜೆ ನೀಡಬೇಕು, ಶಿಕ್ಷಣ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.

ವಿದ್ಯಾರ್ಥಿಗಳು ಈಗಾಗಲೇ ಶಾಲೆಗೆ ಬಂದಿದ್ದರೆ ವಾಪಸ್ ಕಳುಹಿಸುವ ಮತ್ತು ತರಗತಿಗಳನ್ನು ಮುಚ್ಚುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ, ಡಿಸಿ ಸ್ಪಷ್ಟ ಸೂಚನೆ ನೀಡಿದ್ದಾರೆ. ಇನ್ನು ತಾಲ್ಲೂಕುಗಳಲ್ಲಿ, ತಹಶೀಲ್ದಾರ್, ಶಿಕ್ಷಣ ಅಧಿಕಾರಿಗಳಿಗೆ  ಪರಿಸ್ಥಿತಿಯನ್ನು ಅವಲೋಕಿ ಮಾಹಿತಿ ನೀಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!