ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಚಳಿಯ ವಾತಾವರಣ ಮುಂದುವರೆದಿದೆ. ಇಂದು ಸಹ ಮುಂಜಾನೆ ಹಾಗೂ ಸಂಜೆಯ ವೇಳೆಗೆ ಇಬ್ಬನಿ ಬೀಳಲಿದ್ದು, ತೀವ್ರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೇ ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಇರಲಿದೆ. ಇನ್ನೂ ಸಂಜೆಯ ವೇಳೆಗೆ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.