WEATHER | ರಾಜ್ಯದಲ್ಲಿ ಹಲವೆಡೆ ಮಳೆ ಮುಂದುವರಿಕೆ, ಕರಾವಳಿಗೆ ಆರೆಂಜ್‌ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡಿನ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!