ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವೆಡೆ ಒಂದು ವಾರದಿಂದ ಮಳೆಯಾಗುತ್ತಿದ್ದು, ಇಂದು ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆಯಿದೆ ಹಾಗೂ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡಿದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಇಂದು ಕೂಡ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.