ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವೆಡೆ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಬೆಂಗಳೂರು ಸೇರಿದಂತೆ ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕೆಲವು ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ