ಹೊಸದಿಗಂತ ವರದಿ ವಿಜಯನಗರ:
ರಾಜ್ಯ ಸರ್ಕಾರದ ಸಾಧನಾ ಸಮರ್ಪಣಾ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೆಲಿಕಾಪ್ಟರ್ ಪ್ರಯಾಣಕ್ಕೆ ಮಳೆ ಅಡ್ಡಿಯಾಗಿದೆ.
ಹೊಸಪೇಟೆಯಲ್ಲಿರುವ ಡಾ.ಫುನೀತ್ ರಾಜ್ ಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಸಾಧನಾ ಸಮರ್ಪಣಾ ಸಂಕಲ್ಪ ಸಮಾವೇಶ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ದೆಹಲಿಯಿಂದ ಬಳ್ಳಾರಿ ಜಿಲ್ಲೆಯ ಜಿಂದಾಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ್ದಾರೆ.
ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಹೊಸಪೇಟೆಯ ಭರ್ಟಹಳ್ಳಿ ಆಂಜನೇಯ ದೇವಸ್ಥಾನ ಸಮೀಪದ ಮೈದಾನದಲ್ಲಿ ಇಳಿಯಲಿದ್ದರು. ಆದರೆ, ಕಳೆದ ಒಂದು ಗಂಟೆಯಿಂದ ಮಳೆ ಆರಂಭವಾಗಿದ್ದು ಹೆಲಿಕಾಪ್ಟರ್ ಸಂಚಾರಕ್ಕೆ ಅಡ್ಡಿಯಾಗಿದೆ. ಇದರಿಂದಾಗಿ ವಾಯು ಪ್ರಯಾಣದ ಬದಲಿಗೆ ರಸ್ತೆ ಮಾರ್ಗವಾಗಿ ಆಗಮಿಸುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.