ರಾಜ್ಯದಲ್ಲಿ ಮತ್ತೆ ಮಳೆ ಎಂಟ್ರಿ! ಈ ಜಿಲ್ಲೆಗಳ ಜನ ಮುಂಜಾಗ್ರತೆ ಕ್ರಮ ಕೈಗೊಳ್ಳಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮಳೆರಾಯನ ಅಬ್ಬರದಿಂದ ಜನ ಹೈರಾಣಾಗಿದ್ದರು, ಮಳೆ ಸೃಷ್ಟಿಸಿ ಹೋದ ಅವಾಂತರಗಳನ್ನು ಗುಡಿಸುವ ಮುನ್ನವೇ ಮಳೆರಾಯ ಮತ್ತೆ ಎಂಟ್ರಿ ನೀಡಲಿದ್ದಾನೆ.

ರಾಜ್ಯದಲ್ಲಿ ಈ ವಾರದಲ್ಲಿ ಮತ್ತೆ ಮಳೆ ಆಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಮಳೆಯೊಂದು ಮಂಜು ಮತ್ತು ಚಳಿ ಕೂಡ ಇರಲಿದೆ ಎನ್ನಲಾಗುತ್ತಿದೆ.

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ಅದೇ ರೀತಿಯಾಗಿ ಉತ್ತರ ಒಳನಾಡು ಜಿಲ್ಲೆಗಳಿಗೆ ನವೆಂಬರ್ 1 ಮತ್ತು 2 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!