ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುತ್ತಿರುವ ಸಾಧನಾ ಸಮಾವೇಶಕ್ಕೆ ಮಳೆಯ ಭೀತಿ ಎದುರಾಗಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಹೊಸಪೇಟೆಯಲ್ಲಿ ಮೋಡ ಕವಿದ ವಾತಾವರಣ ಇದ್ದು ಮಳೆ ಬರುವ ಸಾಧ್ಯತೆ ಹೆಚ್ಚಾಗಿದೆ. ಕಾರ್ಯಕ್ರಮಕ್ಕೆ ಮೂರು ಲಕ್ಷಕ್ಕೂ ಹೆಚ್ಚು ಜನ ಆಗಮಿಸುವ ಸಾಧ್ಯತೆ ಇದ್ದು, ಮಳೆ ಬಂದರೆ ಕಾರ್ಯಕ್ರಮಕ್ಕೆ ತೊಂದರೆಯಾಗಲಿದೆ.
ಈಗಾಗಲೇ ಮೋಡ ಕವಿದಿದ್ದು, ಗುಡುಗು ಆರಂಭವಾಗಿದೆ. ಯಾವುದೇ ಕ್ಷಣದಲ್ಲಿ ಮಳೆ ಬರುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ವಿಜಯನಗರ ಜಿಲ್ಲೆಗೆ ಯಲ್ಲೋ ಅಲರ್ಟ್ ಜಾರಿ ಮಾಡಿದೆ.
ರಾಜ್ಯದ ವಿವಿಧೆಡೆಯಿಂದ ಕಾರ್ಯಕ್ರಮಕ್ಕೆ ಜನರು ಆಗಮಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ಬೃಹತ್ ಜರ್ಮನ್ ಟೆಂಟ್ ಹಾಕಲಾಗಿದೆ. ಹೀಗಾಗಿ ಮಳೆ ಬಂದರೂ ಕಾರ್ಯಕ್ರಮಕ್ಕೆ ತೊಂದರೆ ಇಲ್ಲ. ಆದರೆ ಊಟದ ವ್ಯವಸ್ಥೆ ಅಸ್ತವ್ಯಸ್ತವಾಗುವ ಸಾಧ್ಯತೆಯಿದೆ.