ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಸೇರಿ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 18ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಧ್ಯಕ್ಕೆ ರಾಜ್ಯಾದ್ಯಂತ ಚಳಿಯ ವಾತಾವರಣವಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಬೀದರ್ನಲ್ಲಿ 10.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಪರಿಚಲನೆ ಉಂಟಾಗಲಿದೆ.ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ತುಸು ಹೆಚ್ಚಿದೆ, ಎಚ್ಎಎಲ್ನಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.