July 21, 2026
Tuesday, July 21, 2026
spot_img

WEATHER | ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್​ನಲ್ಲಿ ಒಣಹವೆ ಇರಲಿದೆ.

ಚಿಂಚೋಳಿ, ಗಬ್ಬೂರು, ಗುರುಮಿಟ್ಕಲ್, ಮಧುಗಿರಿ, ಸೈದಾಪುರ, ಬರಗೂರು, ನಾಯಕನಹಟ್ಟಿ, ಪರಶುರಾಂಪುರ, ಸೇಡಂ, ಹಗರಿಬೊಮ್ಮನಹಳ್ಳಿ, ಜಯಪುರ, ಮಂಗಳೂರು, ಮುನಿರಾಬಾದ್​​ನಲ್ಲಿ ಮಳೆಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !