September 29, 2026
Tuesday, September 29, 2026
spot_img

ವಯನಾಡಿನಲ್ಲಿ ಮಳೆ ಅವಾಂತರ: ಮೃತರ ಸಂಖ್ಯೆ 5ಕ್ಕೆ ಏರಿಕೆ, ಶೋಧ ಕಾರ್ಯ ಮುಂದುವರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ವಯನಾಡಿನ ಮೆಪ್ಪಾಡಿ ಸಮೀಪ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇನ್ನೂ ಐವರು ನಾಪತ್ತೆಯಾಗಿದ್ದು, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಅಗ್ನಿಶಾಮಕ ದಳ ಹಾಗೂ ಶ್ವಾನದಳದ ಸಹಾಯದಿಂದ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಸುರಂಗ ಕಾಮಗಾರಿ ಪ್ರದೇಶದಲ್ಲೇ ದುರಂತ

ಕಲ್ಲಾಡಿ ಪ್ರದೇಶದ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿದ್ದು, ಕೆಸರು ಮಿಶ್ರಿತ ನೀರಿನ ಹರಿವಿನಲ್ಲಿ ಕಾರ್ಮಿಕರು ಸಿಲುಕಿದ್ದರು. ಹಲವರನ್ನು ರಕ್ಷಿಸಲಾಗಿದ್ದು, ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಯುತ್ತಿದೆ.

ನಿರಂತರ ಮಳೆಯ ಹಿನ್ನೆಲೆ ವಯನಾಡಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

Must Read