ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ಮಳೆಗೆ ಗುಡ್ಡ ಮನೆ ಮೇಲೆ ಕುಸಿದ ಪರಿಣಾಮ ಮನೆ ಮಂದಿ ಅಪಾಯದಿಂದ ಪಾರಾಗಿ, ಮನೆಗೆ ಹಾನಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕಸಬಾ ಗ್ರಾಮದ ಕುರುಂಬಳ ಎಂಬಲ್ಲಿ ನಡೆದಿದೆ.
ಕುರುಂಬಳ ನಿವಾಸಿ ಕಲಂದರ್ ಅಲಿ ಅವರ ಮನೆ ಮೇಲೆ ಭಾರೀ ಪ್ರಮಾಣದ ಗುಡ್ಡ ಕುಸಿದು ಬಿದ್ದಿದೆ. ಮನೆಯಲ್ಲಿ ಮಕ್ಕಳು ಸಹಿತ ಏಳು ಮಂದಿ ಇದ್ದು, ಅವರು ಮನೆಯೊಳಗಡೆ ಇದ್ದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.